ಬೆಳ್ಳಾರೆ: ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ಮೋಟಾರ್ಸೈಕಲ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬದ ಸ್ಟೇ ವೈರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ನಡೆದಿದೆ.
ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (28) ಎಂಬವರು ನೀಡಿದ ದೂರಿನ ಪ್ರಕಾರ, ಅವರ ಸಹೋದರ ಧನಂಜಯ ಅವರು ತಮ್ಮ ಸ್ನೇಹಿತ ರೋಷನ್ನನ್ನು KA 19 HK 0323 ನೋಂದಣಿ ಸಂಖ್ಯೆಯ ಮೋಟಾರ್ಸೈಕಲ್ನಲ್ಲಿ ಸಹಸವಾರನಾಗಿ ಕೂರಿಸಿಕೊಂಡು ಬೆಳ್ಳಾರೆ–ಸವಣೂರು ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಕನ್ನಡಕುಮೇರಿ ತಲುಪಿದಾಗ ಬೈಕ್ನ ಮೇಲಿನ ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ಧನಂಜಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ರೋಷನ್ ಗಾಯಗೊಂಡಿದ್ದಾರೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 61/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281, 125(ಎ) ಹಾಗೂ 106ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


























