ಬಂಟ್ವಾಳ, ಅ.23: ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ (ಅ.ಕ್ರ. 139/2007, ಐಪಿಸಿ ಕಲಂ 366, 368, 420, 120, 149) ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಅ.21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಆರೋಪಿಯ ಪಾಸ್ಪೋರ್ಟ್ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


























