ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ
ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಲೋಗೋ ಮತ್ತು ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಅ.26ರಂದು ನಡೆಯಲಿದೆ.
ಪುತ್ತೂರಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸುವಲ್ಲಿ ನಡೆಯುವ ಈ ದೀಪೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಬೆಳಿಗ್ಗೆ ಗಂಟೆ 10ಕ್ಕೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಲಿದೆ.
ದೀಪೋತ್ಸವ ಸಮಿತಿ ಗೌರವಾಧ್ಯಕ್ಷರಾಗಿರುವ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಎಲುಬು ತಜ್ಞ ಡಾ.ಅಜಯ್ ಅವರು ಲೋಗೋ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಆಮಂತ್ರಣ ಪತ್ರ ಬಿಡುಗಡೆ ಮಾಡಲಿದ್ದಾರೆ.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿನುಳಿಯಾಲು ಅವರು ತಿಳಿಸಿದ್ದಾರೆ.
























