ಸುಳ್ಯ: ಗೂನಡ್ಕ ಶಾಲೆಯ ತಿರುವಿನ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು ಬಾಲಕ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ವರದಿಯಾಗಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಲಾರಿ ಗೂನಡ್ಕ ಶಾಲೆಯ ತಿರುವಿನ ಬಳಿ ಪರಸ್ಪರ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಬಾಲಕ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಇತರರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಸುಳ್ಯದ ಆಂಬುಲೆನ್ಸ್ಗಳ ಮೂಲಕ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದವರು ಮೂಲತಃ ಬಂಟ್ವಾಳ ತಾಲೂಕಿನವರು ಎಂದು ತಿಳಿದುಬಂದಿದ್ದು, ಮೃತ ಬಾಲಕನ ಗುರುತು ಹಾಗೂ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

























