ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದಾರೆ.
ಸಿಸಿಬಿ ನೋಟಿಸ್ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ, ತಮಗೆ ಗೊತ್ತಿರುವ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನು? ಯಾವ ಉದ್ದೇಶಕ್ಕಾಗಿ ಈ ರೀತಿ ಮಾಡಲಾಗಿತ್ತು ಎಂಬ ಬಗ್ಗೆ ಸೈಬರ್ ಕ್ರೈಂ ಬ್ರ್ಯಾಂಚ್ ಪೊಲೀಸರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಚಂದನ್, ಮೋಹನ್ ಗೌಡಗಾಗಿ ಪೊಲೀಸರ ಶೋಧ ಮುಂದುವರಿದಿದ್ದು, ಪ್ರಕರಣದಲ್ಲಿ ಎಸ್. ಶಿವಸ್ವಾಮಿ ಎಂಬ ವ್ಯಕ್ತಿಯ ಪಾತ್ರ ಕೂಡ ಬೆಳಕಿಗೆ ಬಂದಿರುವ ಮಾಹಿತಿ ಸಿಕ್ಕಿದೆ.


























