ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ನಟ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.
NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿದ ಸಮಿತಿ ಸದಸ್ಯರು, ಈ ಕುರಿತು ಅಧಿಕೃತ ದೂರು ಸಲ್ಲಿಸಿ ಮನವಿ ಮಾಡಿದರು.
ನಟ ಧನ್ವೀರ್ ಅವರ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆಯಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಹಾಗೂ ಮುಖಂಡರಾದ ಕೌಶಿಕ್, ಸುಶಾನ್ ಮತ್ತು ಏತಾನ್ ಉಪಸ್ಥಿತರಿದ್ದರು.


























