ಸುಳ್ಯ: ದೇವರಕೊಲ್ಲಿಯ ಚಾಮುಂಡೇಶ್ವರಿ ದೈವಸ್ಥಾನದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಅ.26ರಂದು ನಡೆದಿದೆ.
ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಹಾಗೂ ಅಪಘಾತದ ನಿಖರ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

























