ಮಂಗಳೂರು: ಬೀಚ್ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅ.25ರಂದು ಬೀಚ್ನಲ್ಲಿ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪದಡಿ ಯುವಕ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಮಂಗಳವಾರ ಬೆಳಗ್ಗೆ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


























