ವಿಟ್ಲ: ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಕೊಣಾಜೆ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಯಮುನಾ ಅವರು 2026ರ ಏಪ್ರಿಲ್ 19ರಂದು ಒಕ್ಕೆತ್ತೂರು ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ವರ್ಗಾವಣೆಗೊಂಡು ಬಂದಿದ್ದರು. ಆದರೆ, ಅನಾರೋಗ್ಯಕ್ಕೆ ತುತ್ತಾದ ಕಾರಣ ಹಲವು ಸಮಯಗಳಿಂದ ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದ ಯಮುನಾ ಅವರು ಈ ಹಿಂದೆ ಕಡಂಬು, ಅನಿಲಕಟ್ಟೆ ಸರಕಾರಿ ಶಾಲೆಗಳು ಹಾಗೂ ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಒಕ್ಕೆತ್ತೂರು ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ನಿಯುಕ್ತಿಗೊಂಡಿದ್ದ ಅವರು ಅನಾರೋಗ್ಯದ ಕಾರಣ ಪೂರ್ಣಾವಧಿ ಸೇವೆ ಸಲ್ಲಿಸಲು ಸಾಧ್ಯವಾಗಿರಲಿಲ್ಲ.
ಮೃತರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.


























