ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತನಾಗಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ.
ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ವಿಟ್ಲ ಠಾಣೆಯ ಎಸ್ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಮಟ್ಕಾ ಆಟಕ್ಕೆ ಬಳಸುತ್ತಿದ್ದ ಚೀಟಿಗಳು, ನಗದು ಹಣ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























