ಪುತ್ತೂರು: ಜಿ.ಪಂ. ಮಾಜಿ ಸದಸ್ಯ, ಡಿಸಿ ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್(55 ವ) ಜು.3 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಭಾವಿ ರಾಜಕೀಯ , ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.