ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಗೆ ಎಸ್.ಐ. ಸಂತೋಷ್ ಬಿ.ಪಿ ಅವರು ಸುಳ್ಯ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿದ್ದ ಎಸ್.ಐ ಸುರೇಶ್ ಸಿ.ಟಿ ಅವರು ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಸಂತೋಷ್ ಕುಮಾರ್ ಈ ಹಿಂದೆ ಬೆಳ್ಳಾರೆ ಎಸ್ಐ ಆಗಿ ಅಲ್ಲಿಂದ ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು. ಇದೀಗ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.


























