ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಇವರು ೧೦೦ ಮೀಟರ್ ಓಟದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.
ವಿದ್ಯಾರ್ಥಿನಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


























