ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಇವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.
ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ . ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ (ಇವರು ಕೆಮ್ಮಾಯಿ ಯ ನಾಗರಾಜ್ ಗೌಡ.ಕೆ ಹಾಗೂ ಶೋಭಾ ದಂಪತಿಯ ಪುತ್ರ.).
ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


























