ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು–ಬನ್ನೂರು ಘಟಕ, ರೋಟರಿ ಕ್ಲಬ್ ಪುತ್ತೂರು (ಈಸ್ಟ್) ಹಾಗೂ ನವೋದಯ ಯುವಕ ಮತ್ತು ಯುವತಿ ಮಂಡಲ ಬನ್ನೂರು ಇವರ ಆಶ್ರಯದಲ್ಲಿ ನ.8ರಂದು ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಲಿದೆ.
ಬನ್ನೂರಿನ ನವೋದಯ ಯುವಕ ಮಂಡಲದ ಕಟ್ಟಡದಲ್ಲಿ ಬೆಳಗ್ಗೆ 9 ಗಂಟೆಯಿಂದ ಶಿಬಿರ ಆರಂಭವಾಗಲಿದೆ. ಶ್ರೀ ಸತ್ಯನಾರಾಯಣ ಸೇವಾ ಸಮಿತಿ, ಈಶ್ವರಾಂಬೆ ಟ್ರಸ್ಟ್, ನಿಟ್ಟೆ ಎನ್.ಜೆ. ಶೆಟ್ಟಿ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಯೆನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಸಹಯೋಗ ನೀಡಲಿವೆ.
ಶಿಬಿರದಲ್ಲಿ ಕಿವಿ, ಮೂಗು, ಗಂಟಲು (ಇಎನ್ಟಿ) ತಪಾಸಣೆ, ಕಣ್ಣಿನ ಪರೀಕ್ಷೆ ಹಾಗೂ ಉಚಿತ ಕನ್ನಡಕ ವಿತರಣೆ, ಸಕ್ಕರೆ ಕಾಯಿಲೆ ತಪಾಸಣೆ, ರಕ್ತದಾನ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಲಭ್ಯವಿರಲಿವೆ.
ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9632636620 ಅಥವಾ 7676712791 ಸಂಖ್ಯೆಯನ್ನು ಸಂಪರ್ಕಿಸಬಹುದು.


























