ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಕಣ್ಣೂರಿನ ಮಸೀದಿ ಸಮೀಪ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಶುಕ್ರವಾರ (ನ.6) ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಲಾರಿ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು. ಇತ್ತ ಸಂಚಾರ ಪೊಲೀಸರು ವಾಹನಗಳನ್ನು ಪರ್ಯಾಯ ರಸ್ತೆಗಳ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಿದರು.
ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು.


























