ಪುತ್ತೂರು: ಮಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ. ಅವರು ನ.6ರಂದು ರಾತ್ರಿ ನಿಧನರಾದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.


























