ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಮೇ 13ರಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ನೀಡಲಾದ ದೂರಿನ ಮೇರೆಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್ಎಸ್ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಪ್ರಸ್ತುತ 13 ವರ್ಷದ ಬಾಲಕನಿಗೆ ಸಂಬಂಧಿಸಿದ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯವರಿಗೆ ವಹಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

























