ಉಪ್ಪಿನಂಗಡಿ: ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ರಸ್ತೆಗೆ ಮಗುಚಿ ಬಿದ್ದು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನ.10ರಂದು ಮಂಗಳವಾರ ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ದ್ವಿಪಥದ ಏಕಮುಖ ರಸ್ತೆಯಿಂದ ಏಕಾಏಕಿ ಮತ್ತೊಂದು ಪಥಕ್ಕೆ ಬಂದಿದ್ದಾನೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬೈಕ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಮಗುಚಿ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಬೆಂಕಿ ನಂದಿಸುವ ವ್ಯವಸ್ಥೆ ಇಲ್ಲದ ಕಾರಣ ಬೈಕ್ ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾಗಿದೆ.
ಅದೃಷ್ಟವಶಾತ್ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.


























