ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್ನಲ್ಲಿ ನ.11ರ ಮುಂಜಾನೆ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ನಾವೂರು ನಿವಾಸಿ ಸಂತೋಷ್ (32) ಮೃತಪಟ್ಟಿದ್ದು, ಮತ್ತೊಂದು ಬೈಕ್ನ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಗಂಭೀರ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವು ಗುರುವಾಯನಕೆರೆ ಕಡೆಗೆ ಸಂಚರಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸಂತೋಷ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮೋಹನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೂಡ್ಸ್ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತ ಸಂತೋಷ್ ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಗಾಯಾಳು ಮೋಹನ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದರು.


























