ಸುಳ್ಯ: ಸುಳ್ಯ ತಾಲೂಕಿನ ಕಸಬಾ ಗ್ರಾಮದ ದುಗಲಡ್ಕ ಎಂಬಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತ ಮಹಿಳೆಯನ್ನು ಕಮಾರುನ್ನಿಸಾ 46 ಎಂದು ಗುರುತಿಸಲಾಗಿದ್ದು ಮಹಿಳೆಯು ರಬ್ಬರ್ ಮೂರ್ತೆಗೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಸುಳ್ಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


























