ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾದ ಘಟನೆ ನ.12ರಂದು ನಡೆದಿದೆ.
ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ಗುರುವಾರ ಸಂಜೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿದ್ದಾಗ ಬುರುಡೆ ಪತ್ತೆಯಾಗಿದೆ.
ಈ ಕುರಿತು ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದು, ದೂರರ್ಜಿಯನ್ನು 422/2026ನೇ ಸಂಖ್ಯೆಯಲ್ಲಿ ಸ್ವೀಕರಿಸಲಾಗಿದೆ. ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


























