ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಅವರು 2026ರ ಫೆ.4ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂತಿರುಗಿದಾಗ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿತ್ತು. ಮನೆಯೊಳಗೆ ಪರಿಶೀಲಿಸಿದಾಗ ಲಾಕರ್ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪೈಕಿ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ (21) ಎಂಬಾತ ನ.11ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಬಳಿಕ ಪೊಲೀಸರು ಪ್ರಕರಣದ ವಿಚಾರಣೆಗಾಗಿ ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


























