ಪುತ್ತೂರು: ನೆಹರುನಗರದ ಸುದಾನ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಅಂತರ್ ಶಾಲಾ ಉತ್ಸವ ‘ಸುದಾನ ಲೂಮಿಯ – 2026’ ನವೆಂಬರ್ 17ರ ಮಂಗಳವಾರದಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಕೌಶಲ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಮನರಂಜನಾತ್ಮಕ, ಸಾಂಸ್ಕೃತಿಕ ಹಾಗೂ ಜ್ಞಾನಾಧಾರಿತ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುವ ನಿರೀಕ್ಷೆಯಿದೆ.
ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಸ್ಪರ್ಧಾತ್ಮಕ ಮನೋಭಾವ ಹಾಗೂ ಪರಸ್ಪರ ಸಹಕಾರದ ಗುಣಗಳನ್ನು ಬೆಳೆಸುವುದು ಉತ್ಸವದ ಪ್ರಮುಖ ಉದ್ದೇಶವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದರು.


























