ಪುತ್ತೂರು: ಪರವಾನಿಗೆಯಿಲ್ಲದೆ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದ ಸಂಪ್ಯ ಪೊಲೀಸರು, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಮೂರು ಹಸುಗಳನ್ನು ರಕ್ಷಿಸಿರುವ ಘಟನೆ ನ.15ರ ರಾತ್ರಿ ಮಾಡೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ.
ಈಶ್ವರಮಂಗಲದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ತಮಿಳುನಾಡು ನೋಂದಣಿಯ ಅಶೋಕ್ ಲೇಲ್ಯಾಂಡ್ ಟೆಂಪೊದಲ್ಲಿ ಮೂರು ಹಸುಗಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗೋವುಗಳ ಸಾಗಾಟಕ್ಕೆ ಯಾವುದೇ ಪರವಾನಿಗೆ ಇಲ್ಲದಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ವಾಹನ ಹಾಗೂ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು, ಮೂರು ಹಸುಗಳನ್ನು ರಕ್ಷಿಸಿದ್ದಾರೆ.

























