ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾರ್ಯಾಚರಿಸುತ್ತಿರುವ ದುರ್ವಾಸನೆಯುಕ್ತ ಅನಧಿಕೃತ ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕ ತಕ್ಷಣ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಪಂಚಾಯತ್ ಪಿಡಿಒ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿ ನ.17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಾಗೃತ ಹಿಂದೂ ಜಾಗರಣ ಈಶ್ವರಮಂಗಲ, ಎಸ್ಕೆಎಸ್ಎಸ್ಎಫ್ ಮೇನಾಲ ಯೂನಿಟ್, ಎಸ್ಎಸ್ಎಫ್ ಮೇನಾಲ ಯೂನಿಟ್, ಸರ್ವಪಕ್ಷ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ಮೇನಾಲ-ಈಶ್ವರಮಂಗಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ನ.17ರಂದು ಮಧ್ಯಾಹ್ನ 2 ಗಂಟೆಗೆ ಈಶ್ವರಮಂಗಲ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

























