ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ವೊಬ್ಬರು ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.**
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಗೆ ಹೋಗಿದ್ದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತ ಸೆಲೂನ್ ಸಿಬ್ಬಂದಿ ಎಂದು ತಿಳಿದು ಬಂದಿದೆ.

























