ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಬಿಜು, ಶಿಜಿ ಹಾಗೂ ಪೌಲೋಸ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳು ಹಾಗೂ ತಾಲೂಕು ಕಾಂಗ್ರೆಸ್ನ ಅಸಮರ್ಥ ನಾಯಕತ್ವದಿಂದ ಬೇಸತ್ತು ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಶಾಸಕರ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಗೌಡ, ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ., ಪುದುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಪೂರ್ಣಾಕ್ಷ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

























