ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್ನಲ್ಲಿನ 19 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬೊಳ್ಳಾರು, ನೆಕ್ಕಿಲಾಡಿ, ಸುಭಾಶ್ ನಗರ ಮತ್ತು ವಾಟರ್ ಸಪ್ಲೈ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

























