ಪುತ್ತೂರು: ಬೈಪಾಸ್ ರಸ್ತೆಯ ದರ್ಬೆ ಸಮೀಪ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಮತ್ತೋರ್ವರು ಗಂಭೀರ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ.
ಮಂಗಳೂರು ಕಡೆಗೆ ತೆರಳುತ್ತಿದ್ದ ಮಡಿಕೇರಿ ನೋಂದಣಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಮತ್ತೋರ್ವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

























