ವಿಟ್ಲ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನಡೆದಿದೆ.
ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ನ ವಿದ್ಯಾರ್ಥಿನಿ ಫಾತಿಮಾ ಇಝಾಹಾ ಇಲ್ಯಾಸ್ (ಹೆಸರು) ಮೃತಪಟ್ಟ ಬಾಲಕಿ.
ಶಾಲೆ ಮುಗಿಸಿ ಬಸ್ಸಿನಲ್ಲಿ ಬಂದಿದ್ದ ಬಾಲಕಿ ನೇರಳಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

























