ಕಡಬ: ಇತ್ತೀಚೆಗೆ ಆತೂರು ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೋಲಿಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28ವ) ಮತ್ತು ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27ವ) ಬಂಧಿತರು, ಇವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಷರತ್ತುಬದ್ದ ಜಾಮೀನು:
ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್‌ಖಾನ್, ಅಬ್ದುಲ್ ರಹಿಮಾನ್ ಹಿರೇಬಂಡಾಡಿ ವಾದಿಸಿದರು.