ಪುತ್ತೂರು: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕು. ಪ್ರಜ್ಞಾ ತೇರ್ಗಡೆಯಾಗಿದ್ದಾರೆ. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರಜ್ಞಾ ಓಡಿಲ್ನಾಳ ಅವರು ಪುತ್ತೂರು ಝೂಮ್ ಟಿ.ವಿ.ಯ ನಿರೂಪಕಿಯಾಗಿದ್ದು ಹಲವು ಕಾರ್ಯಕ್ರಮಗಳ ನಿರೂಪಣೆ ಮೂಲಕ ಗಮನ ಸೆಳೆದಿದ್ದಾರೆ.

























