ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗಿರುವ ‘ಅಶೋಕ ಜನಮನ-2026’ ಕಾರ್ಯಕ್ರಮ ನ.22ರಂದು ಭಾನುವಾರ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದು ಜನಸಾಮಾನ್ಯರ ನಾಡಿಮಿಡಿತ ಎಂಬ ಆಶಯದೊಂದಿಗೆ ನಡೆಯಲಿರುವ ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಕಾರ್ಯಕ್ರಮದ ದೀಪಾವಳಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ನ ಪ್ರವರ್ತಕ ಹಾಗೂ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಆಶೀರ್ವಚನ ಮತ್ತು ಉಪಸ್ಥಿತಿ ನೀಡಲಿದ್ದಾರೆ.
ಈ ಬಾರಿ ದೀಪಾವಳಿ ಹಬ್ಬದ ಪ್ರಯುಕ್ತ 14ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸುಮಾರು ಒಂದು ಲಕ್ಷ ಜನರಿಗೆ ಉಡುಗೊರೆ ವಿತರಿಸುವ ಉದ್ದೇಶ ಹೊಂದಲಾಗಿದೆ. ಸಾರ್ವಜನಿಕರಿಗೆ ತಟ್ಟೆ, ಸೀರೆ ಅಥವಾ ಬೆಡ್ಶೀಟ್ಗಳಲ್ಲಿ ತಮಗೆ ಇಷ್ಟವಾದ ಒಂದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಉಪಾಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

























