ಪುತ್ತೂರು: ಐತಿಹಾಸಿಕ ಪ್ರಸಿದ್ಧಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಮಾರು ಗದ್ದೆಯಲ್ಲಿ ನಡೆಯುವ ಕಂಬಳಕ್ಕೆ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವಿದೆ. ಇದೀಗ ಈ ಕಂಬಳದ ಕರೆಯ ಸ್ಥಳಾಂತರ ಹಾಗೂ ನೂತನ ಕರೆ ನಿರ್ಮಾಣದ ಕಾರ್ಯಗಳು ನಡೆಯುತ್ತಿದ್ದು, ನಿರ್ಮಾಣ ಕಾರ್ಯಕ್ಕೆ ವಿವಿಧ ರೀತಿಯ ಸಹಕಾರ ವ್ಯಕ್ತವಾಗುತ್ತಿದೆ.
ನೂತನ ಕರೆ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿರುವ ಕಂಬಳ ಸಮಿತಿಯ ಉಪಾಧ್ಯಕ್ಷ ರೋಶನ್ ರೈ ಬನ್ನೂರು ಅವರು ನಿರ್ಮಾಣ ವೆಚ್ಚದ ನೆರವಿಗಾಗಿ ₹1 ಲಕ್ಷವನ್ನು ಸಮಿತಿಗೆ ಹಸ್ತಾಂತರಿಸಿದರು.
ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರ ಮೂಲಕ ಪ್ರಮುಖ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ಈ ಮೊತ್ತವನ್ನು ಹಸ್ತಾಂತರಿಸಲಾಯಿತು.

























