ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ- 2026 ‘ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪುತ್ತೂರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ.
ಪುತ್ತೂರು ದೀಪೋತ್ಸವ ಸಮಿತಿಯವರು ಶಾಸಕ ಅಶೋಕ್ ಕುಮಾರ್ ರೈ ಅವರ ನಿವಾಸಕ್ಕೆ ತೆರಳಿ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ‘ಪುತ್ತೂರು ದೀಪೋತ್ಸವ ವಿಶೇಷ ರೀತಿಯ ಕಾರ್ಯಕ್ರಮ. ನಾನು ಈ ಕಾರ್ಯಕ್ರಮಕ್ಕೆ ಬರುತ್ತೇನೆ’ ಎಂದು ಹೇಳಿದ ಶಾಸಕರು, ಭಕ್ತರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿನುಳಿಯಾಲು, ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಂಚಾಲಕ ಸಂತೋಷ್ ಕುಮಾರ್ ರೈ, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ ಸಹಿತ ಸಮಿತಿ ಪದಾಧಿಕಾರಿಗಳು ಜೊತೆಗಿದ್ದರು.

























