ಸುಳ್ಯ: ಪೆರಾಜೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಕಾರು ಸುಳ್ಯದಿಂದ ಗೋಣಿಕೊಪ್ಪದ ಕಡೆಗೆ ತೆರಳುತ್ತಿದ್ದು, ವಿನು ಎಂಬವರು ಕಾರು ಚಲಾಯಿಸುತ್ತಿದ್ದರು. ಇದೇ ವೇಳೆ ಅರಂತೋಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ಪಲ್ಟಿಯಾಗಿದ್ದು, ಕಾರು ಮತ್ತು ರಿಕ್ಷಾ ಎರಡೂ ಜಖಂಗೊಂಡಿವೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

























