ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಜನರು ಬೀದಿಗಳಿದು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಜನರಿಗೆ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ಸಹ ಬೆಂಬಲವಾಗಿ ನಿಂತಿದ್ದು, ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆನೆಗಳ ಸ್ಥಳಾಂತರ ಹಾಗೂ ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಸಲೇಬೆಕಂದು ಮೂಡಿಗೇರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದು, ಈ ಸಂಬಂಧ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಹೌದು….ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ (ನವೆಂಬರ್ 22) ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಇಂದು (ನವೆಂಬರ್ 23) ನಯನಾ ಮೋಟಮ್ಮ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ್ದಾರೆ. ಆದ್ರೆ, ಸ್ಪೀಕರ್ ಇಲ್ಲದಿದ್ದರಿಂದ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಆದ್ರೆ, ವಿಧಾನಸೌಧದಲ್ಲಿರುವ ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ
ನಾನು ರಾಜೀನಾಮೆ ಪತ್ರ ಸ್ವೀಕರಿಸಲು ಅವಕಾಶವಿಲ್ಲ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಹೇಳಿದ್ದಾರೆ. ಅಲ್ಲದೇ ರಾಜೀನಾಮೆ ನೀಡಲು ಬಂದಿರುವ ವಿಚಾರವನ್ನು ಸ್ಪೀಕರ್ ಗೆ ಕರೆ ಮಾಡಿ ತಿಳಿಸಿದ್ದು, ಮುಂದೇನಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

























