ವಿಟ್ಲ: ಕನ್ಯಾನ ಗ್ರಾಮದ ಗ್ರಾಮ ಆಡಳಿತಾಧಿಕಾರಿಗೆ ಕಚೇರಿಯಲ್ಲೇ ಅವಾಚ್ಯವಾಗಿ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವಬೆದರಿಕೆ ಒಡ್ಡಿದ ಘಟನೆ ನ.23ರಂದು ನಡೆದಿದೆ.
ಕನ್ಯಾನ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ (35) ಅವರು ಸೋಮವಾರ ಅಪರಾಹ್ನ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ, ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಎಂಬಾತ ಕಚೇರಿಗೆ ಆಗಮಿಸಿದ್ದಾನೆ. ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ಆತ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ ಜೀವಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಅನಿಲ್ ಕುಮಾರ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.243/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 132, 352 ಹಾಗೂ 351(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























