ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಐಟಿಐ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿಯಲ್ಲಿ ನಡೆದಿದೆ.
ಮೃತರನ್ನು ದೇವಸಕೋಡಿ ನಿವಾಸಿ ಹರ್ಷಿತ್ (18) ಎಂದು ಗುರುತಿಸಲಾಗಿದೆ. ಅವರು ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವಿದ್ಯಾಭ್ಯಾಸ ಮಾಡುತ್ತಿದ್ದರು.
ನ.26ರಂದು ಬೆಳಿಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹರ್ಷಿತ್ ಅವರನ್ನು ಕುಟುಂಬಸ್ಥರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನ.27ರಂದು ಅವರು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಹಾಗೂ ಸಹೋದರಿ ಯನ್ನು ಅಗಲಿದ್ದಾರೆ.ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


























