ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕೃತ್ಯಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.


























