ವಳಾಲು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಈ ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅನುಮತಿ ಪಡೆಯದೆ ಸಭೆ ಅಥವಾ ಪ್ರತಿಭಟನೆ ನಡೆಸಿ ಕಾನೂನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕರು ಪ್ರತಿಭಟನೆಯಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.


























