ಆನೇಕಲ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಆನೆ ದಂತ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿ, ಏಳು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಪ್ರವಾಸಿ ತಾಣವಾದ ಮುತ್ಯಾಲಮಡುವು ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ವನ್ಯಜೀವಿ ಬೇಟೆ ಮತ್ತು ದಂತ ಹಾಗೂ ಜಿಂಕೆ ಮಾಂಸ ಸಾಗಾಣಿಕೆ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಚರಣೆ ಕೈಗೊಂಡಿದ್ದರು.


























