ದಕ್ಷಿಣ ಕನ್ನಡ ಜಿಲ್ಲೆಯ ಕ್ರಿಶ್ಚಿಯನ್ ವಿವಾಹ ನೋಂದಣಾಧಿಕಾರಿಯಾಗಿ ಕರ್ನಾಟಕ ಸರ್ಕಾರದಿಂದ ಬಂಟ್ವಾಳದ ಯುವ ವಕೀಲ ಆಲ್ವಿನ್ ಪ್ರಶಾಂತ್ ಮೊಂತೇರೋ ವಿಟ್ಲ ನೇಮಕಗೊಂಡಿದ್ದಾರೆ.
1965ರ ವಿಧಿಯನ್ವಯ ಪ್ರದತ್ತವಾಗಿರುವ ಅಧಿಕಾರ ಚಲಾಯಿಸಿರುವ ಎ. ಪಿ. ಮೊಂತೇರೋ ಇವರನ್ನು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ನೋಂದಣಿ ಉದ್ದೇಶಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸಿ ಅಖಿಲ ಭಾರತ ಕ್ರಿಶ್ಚಿಯನ್ ವಿವಾಹ ಕಾಯ್ದೆಯಡಿಯಲ್ಲಿ ಸೂಚಿಸಿರುವ ಷರತ್ತಿಗೊಳಪಟ್ಟು ಕ್ರಿಶ್ಚಿಯನ್ ಜನಾಂಗದ ವಿವಾಹ ನೋಂದಣಾಧಿಕಾರಿಯನ್ನಾಗಿ ಕಾರ್ಯ ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿದೆ.