ಪುತ್ತೂರು : ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಅಬ್ದುಲ್ ನಾಸೀರ್ (25ವ.) ಅವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜು.5ರಂದು ಬೆಳಗ್ಗೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಬಂಧಿತರಲ್ಲಿ ಓರ್ವ ಆರೋಪಿಯನ್ನು ಸವಣೂರಿನ ಅಝರ್ ಎಂಬ ಮಾಹಿತಿಯಿದ್ದು ಇನ್ನೋರ್ವ ಆರೋಪಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸಯ್ಯದ್ ಮೋನು ಹಾಗೂ ನಾಸಿರ್ ಎಂಬಿಬ್ಬರ ಬಂಧನ ಕೂಡಾ ಆಗಿದೆ ಎನ್ನುವ ಸುದ್ದಿ ಹಬ್ಬಿದ್ದು ಸರ್ವೆ ಸೇತುವೆ ಬಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಈಗಾಗಲೇ ಬಂಧಿಸಿದ್ದು, ಇಬ್ಬರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ. ಇದೇ ವೇಳೆ ಇನ್ನೋರ್ವ ಆರೋಪಿ ಕೂಡ ಪೊಲೀಸ್ ವಶ ಆಗಿರುವ ಮಾಹಿತಿ ಲಭಿಸಿದ್ದು ,ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ ಎಂಬ ಮಾಹಿತಿ ಲಭಿಸಿದೆ.