ಪುತ್ತೂರು ನಗರದ ಕಿಲ್ಲೆ ಮೈದಾನದಲ್ಲಿ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿ ದುಷ್ಕೃತ್ಯ ಮೆರೆದಿದ್ದಾರೆ. ಇದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ತೀವ್ರವಾಗಿ ಖಂಡಿಸುತ್ತದೆ.
ಹಾಗೂ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಅಗ್ರಹಿಸುತ್ತದೆ ಎಂದು ಹೇಳಿದ್ದಾರೆ.