ಪುತ್ತೂರು :ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ವಿರುದ್ಧವಾಗಿ ಕೆಪಿಸಿಸಿಯ ನಿರ್ದೇಶನದಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರಿನ ನೆಹರು ನಗರದಿಂದ ದರ್ಬೆ ಜಂಕ್ಷನ್ ವರಗೆ ಸೈಕಲ್ ರ‍್ಯಾಲಿ ಮತ್ತು ಪಾದಯಾತ್ರೆಯು ಜು.7 ರಂದು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಐಸಿಸಿಯ ಕಾರ್ಯದರ್ಶಿಗಳೂ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ,ಪುತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಶೆಟ್ಟಿ ಮತ್ತು ಜಿಲ್ಲಾ ವಕ್ತಾರರಾದ ಮಹಮ್ಮದ್ ಬಡಗನ್ನೂರು, ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಮುಂಚೂಣಿ ಘಟಕದ ಅಧ್ಯಕ್ಷರು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಭಾಗವಹಿಸಬೇಕಾಗಿ ಹಾಗೂ ಸೈಕಲ್ ಇರುವವರು ಸೈಕಲ್ ಗಳನ್ನು ತೆಗೆದುಕೊಂಡು ಬರಬೇಕಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.