ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಸ್ವಿಫ್ಟ್ ಡಿಸೈರ್ ಕಾರೊಂದು ಪಲ್ಟಿಯಾಗಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆಗೆ ನಡೆದಿದೆ ಕಾರಿನಲ್ಲಿದ್ದವರು ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದರು. ಆಲೆಕಾನ್, ಬಿದ್ರುತಳ ಮಧ್ಯೆ ನೂರು ಅಡಿ ಪ್ರಪಾತಕ್ಕೆ ಕಾರು ಬಿದಿದ್ದು, ತಡೆಗೋಡೆ ಇಲ್ಲದ ಕಾರಣ ಈ ಅಪಘಾತ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಇಬ್ಬರಿಗೆ ತೀವ್ರ ಗಾಯ, ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದೆ.