ಕಾಸರಗೋಡು: ಕಂಪ್ಯೂಟರ್ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ.
ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಜು.07 ರ ಬುಧವಾರ ಬೆಳಿಗ್ಗೆ ಘಟನೆ ನಡೆದಿದ್ದು ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.
ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.