ಮಂಗಳೂರು: ಮಂಗಳೂರು – ಯಶವಂತಪುರ ನಡುವೆ ಸಂಚರಿಸುವ ವಿಶೇಷ ರೈಲಿಗೆ ಉದ್ದೇಶಿಸಿ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳ ಸೇರ್ಪಡೆ ನಡೆದಿದ್ದು, ರೈಲ್ವೇ ಇಲಾಖೆ ಈ ಕುರಿತ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಜುಲೈ 11ರಿಂದ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಂಚಾರ ಮಾಡಲಿದ್ದು ಪ್ರಯಾಣಿಕರು ಪಶ್ಚಿಮ ಘಟ್ಟ ಸಮೇತ ಪ್ರಕೃತಿಯ ಸೌಂದರ್ಯ ಆಸ್ವಾದಿಸಬಹುದಾಗಿದೆ.
3 ರೈಲುಗಳಿಗೆ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿ ತೆಗೆದು ತಲಾ 2 ವಿಸ್ಟಾಡೋಮ್ ಕೋಚ್ ಬೋಗಿ ಅಳವಡಿಕೆ ಮಾಡಲಾಗಿದೆ .ಗಾಜಿನ ಛಾವಣಿಯನ್ನು ಹೊಂದಿರುವ ಈ ಬೋಗಿಗಳ ಮೂಲಕ ನಿಸರ್ಗದ ಸೌಂದರ್ಯ ಸವಿಯಬಹುದಾಗಿದೆ.
ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವೆ ಪಶ್ಚಿಮ ಘಟ್ಟದ ಹಸಿರು ಸೌಂದರ್ಯದಟ್ಟವಾದ ಅರಣ್ಯ, ಅಲ್ಲಲ್ಲಿ ಕಾಣುವ ಜಲಪಾತ, ರೈಲು ಸುರಂಗ ಮಾರ್ಗ, ಶಿರಾಡಿ ಘಾಟ್‌ನ ಸೌಂದರ್ಯವನ್ನು ಜನರು ರೈಲಿನಲ್ಲಿಯೇ ಕುಳಿತು ಕಣ್ತುಂಬಿಕೊಳ್ಳಬಹುದಾಗಿದೆ. ಮಳೆಗಾಲವೂ ಆಗಿರುವುದರಿಂದ ಪಶ್ಚಿಮ ಘಟ್ಟದ ಸೌಂದರ್ಯ ಇಮ್ಮಡಿಯಾಗಿದೆ.